ಮಂಗಳೂರು, ಸೆ. 09 (DaijiworldNews/AK): ಲೋಕಾಯುಕ್ತ ಕೇಂದ್ರ ಕಚೇರಿಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಲೋಕಾಯುಕ್ತ ಅಧಿಕಾರಿಗಳು ಸೆಪ್ಟೆಂಬರ್ 9 ರ ಬುಧವಾರ ದಕ್ಷಿಣ ಕನ್ನಡ, ಸುಳ್ಯ ಮತ್ತು ಬೆಳ್ತಂಗಡಿ ತಾಲ್ಲೂಕುಗಳ ಆರು ಗ್ರಾಮ ಪಂಚಾಯಿತಿಗಳಿಗೆ ದಿಢೀರ್ ಭೇಟಿ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ , ನೆಕ್ಕಿಲಾಡಿ ಗ್ರಾಮ ಪಂಚಾಯತ್, ಸುಳ್ಯ ತಾಲೂಕಿನ ಕಲ್ಮಡ್ಕ , ಗುತ್ತಿಗಾರು ಗ್ರಾಮ ಪಂಚಾಯತ್ ಬೆಳ್ತಂಗಡಿ ತಾಲೂಕಿನ ಉಜಿರೆ ಮತ್ತು ಲಾಯಿಲ ಗ್ರಾಮ ಪಂಚಾಯತ್ ಸೇರಿ ಒಟ್ಟು 06 ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಿದರು.
ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಅನಿರೀಕ್ಷಿತ ತಪಾಸಣೆಗಳನ್ನು ನಡೆಸಲಾಯಿತು.
ತಂಡದಲ್ಲಿ ಮಂಗಳೂರು ಲೋಕಾಯುಕ್ತ ಘಟಕದ ಉಪ ಪೊಲೀಸ್ ವರಿಷ್ಠಾಧಿಕಾರಿ ಡಾ.ಗಣ ಪಿ. ಕುಮಾರ್; ಸುರೇಶ್ ಕುಮಾರ್ ಪಿ ಮತ್ತು ಪೊಲೀಸ್ ನಿರೀಕ್ಷಕಿ ಭಾರತಿ ಜಿ; ಕಾರವಾರ ಲೋಕಾಯುಕ್ತ ಘಟಕದ ಉಪ ಪೊಲೀಸ್ ವರಿಷ್ಠಾಧಿಕಾರಿ ಧನ್ಯಾ ನಾಯಕ್; ಪೊಲೀಸ್ ನಿರೀಕ್ಷಕ ರವಿ ಎನ್.ಎನ್; ಉಡುಪಿ ಲೋಕಾಯುಕ್ತ ಘಟಕದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಲ ಮೂರ್ತಿ ರಾವ್ ವಿ.ಎಸ್; ಮತ್ತು ಪೊಲೀಸ್ ನಿರೀಕ್ಷಕ ಮಂಜುನಾಥ್ ಮತ್ತು ಇತರ ಸಿಬ್ಬಂದಿ ಇದ್ದರು
ಲೋಕಾಯುಕ್ತ ಅಧಿಕಾರಿಗಳು ತಪಾಸಣೆಯ ಸಮಯದಲ್ಲಿ ಗುರುತಿಸಲಾದ ನ್ಯೂನತೆಗಳ ಕುರಿತು ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.