ಕುಂದಾಪುರ, ಸೆ. 11 (DaijiworldNews/TA): ಅರಾಟೆ ರಾಷ್ಟ್ರೀಯ ಹೆದ್ದಾರಿ 66ರ ಹಳೆ ಸೇತುವೆ ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರ ಸುರಕ್ಷತೆಗಾಗಿ ಕುಂದಾಪುರ ಹೆಮ್ಮಾಡಿ ಸಮೀಪದ ಮೂವತ್ತುಮುಡಿ ಕ್ರಾಸ್ನಿಂದ ಅರಾಟೆ ಸೇತುವೆವರೆಗೆ ರಿಫ್ಲೆಕ್ಟರ್ ಇರುವ ಕೋನ್ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ.

ಅರಾಟೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಹಳೆ ಸೇತುವೆಯನ್ನು ಪುನರ್ ನಿರ್ಮಿಸುವ ಕಾಮಗಾರಿ ನಡೆಯುತ್ತಿದ್ದು ಹೊಸ ಸೇತುವೆಯಲ್ಲಿ ಎರಡು ಕಡೆ ಸಾಗುವ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಪಘಾತಗಳು ಸಂಭವಿಸಿದ್ದವು.
ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ನಿರ್ದೇಶನದಲ್ಲಿ, ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ, ಬೈಂದೂರು ಪೊಲೀಸ್ ವೃತ್ತನಿರೀಕ್ಷಕರ ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ಐ ಪವನ್ ನಾಯಕ್ ಸೂಚನೆಯಂತೆ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿದ ಐಆರ್ಬಿ ಕಂಪೆನಿಯು ಹೆಮ್ಮಾಡಿ ಸಮೀಪದ ಮೂವತ್ತುಮುಡಿ ಕ್ರಾಸ್ನಿಂದ ಅರಾಟೆ ಸೇತುವೆವರೆಗೆ ರಿಫ್ಲೆಕ್ಟರ್ ಇರುವ ಕೋನ್ ಅಳವಡಿಸುವ ಕಾರ್ಯ ಆರಂಭಿಸಲಾಗಿದೆ.