ಬೆಳ್ತಂಗಡಿ, ಸೆ.12 (DaijiworldNews/AA): ಬೆಳ್ತಂಗಡಿ ತಾಲೂಕಿನ ಉಷಾರಾಣಿ ಅವರು ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ಇದಕ್ಕೂ ಮುನ್ನ ಅವರು ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಉಷಾರಾಣಿ ಅವರು ಉಜಿರೆಯ ಎಸ್ಡಿಎಂ ಕಾಲೇಜಿನ ಹಳೆಯ ವಿದ್ಯಾರ್ಥಿನಿಯಾಗಿದ್ದಾರೆ. ಅವರು ಬೆಳ್ತಂಗಡಿಯ ಹಿರಿಯ ವಕೀಲರಾಗಿದ್ದ ದಿ. ನೇಮಿರಾಜ ಶೆಟ್ಟಿ ಅವರ ಪುತ್ರಿ.