ಮಂಗಳೂರು, ಸೆ.18 (DaijiworldNews/AA): ತುಳುವಿಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಸಂಭ್ರಮಾಚರಣೆಗಳು ನಡೆದವು.











ಸಚಿವರು ಹಾಗೂ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಹಲವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು. ಜನರು ಪಟಾಕಿ ಸಿಡಿಸಿ, ಸಿಹಿ ಹಂಚಿಕೊಂಡು ಸರ್ಕಾರದ ನಿರ್ಧಾರವನ್ನು ಉತ್ಸಾಹದಿಂದ ಸ್ವಾಗತಿಸಿದರು.
ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ರಾಜ್ಯ ಸರ್ಕಾರದ ನಿರ್ಧಾರವು ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದಂತಾಗಿದೆ.
ತುಳು ಭಾಷೆಯನ್ನು ಸಂರಕ್ಷಿಸುವುದು ಹಾಗೂ ಮತ್ತಷ್ಟು ಉತ್ತೇಜಿಸುವುದರ ಜೊತೆಗೆ, ಕರಾವಳಿ ಕರ್ನಾಟಕದ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.