ಮಂಗಳೂರು, ಸೆ.19 (DaijiworldNews/AA): ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ದನ ಪೂಜಾರಿ ಅವರನ್ನು ಸಿಎಂ ಡಿಕೆ ಶಿವಕುಮಾರ್ ಅವರು ಶುಕ್ರವಾರ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.



ಮಂಗಳೂರಿನಲ್ಲಿ ನಡೆದ ಐತಿಹಾಸಿಕ ವಿಶೇಷ ಸಚಿವ ಸಂಪುಟ ಸಭೆಯ ಮಹತ್ವದ ಸಂದರ್ಭದಲ್ಲೇ ಹಿರಿಯರ ಭೇಟಿಯ ಸುಯೋಗ ಒದಗಿಬಂದಿದ್ದು ಅತ್ಯಂತ ಸಂತಸ ತಂದಿದೆ ಎಂದು ಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.