ಮಂಗಳೂರು, ಸೆ.23 (DaijiworldNews/AK): ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣದ ಬಿಡುಗಡೆಗಾಗಿ ಲಂಚಪಡೆದ ಆರೋಪದಲ್ಲಿ ಬಂಧಿತ ಬಜ್ಪೆ ಪೊಲೀಸ್ ನಿರೀಕ್ಷಕ ಬಾಲಕೃಷ್ಣಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಸಂತಸ್ತರಿಂದ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಹಣವನ್ನು ವಶಪಡಿಸಿಕೊಂಡು ಹಣವನ್ನು ಅವರಿಗೆ ವಾಪಸ್ ನೀಡಲು 25 ಸಾವಿರ ರೂ. ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಸಂತ್ರಸ್ತರಿಂದ 15 ಸಾವಿರ ರೂ. ಮುಂಗಡವಾಗಿ ಪಡೆದುಕೊಂಡಿದ್ದ ಬಾಲಕೃಷ್ಣ ಇನ್ನೂ 5 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಲಂಚ ಪಡೆದ ಹಣದ ಸಮೇತ ಅವರನ್ನು ಬಂಧಿಸಿದ್ದರು. ಲೋಕಾಯುಕ್ತ ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ನ್ಯಾಯಾಧೀಶರ ಮುಂದೆ ಅವರು ಅನಾರೋಗ್ಯ ಕಾರಣ ನೀಡಿ, ಆಸ್ಪತ್ರೆಗೆ ದಾಖಲಿಸುವಂತೆ ಕೇಳಿಕೊಂಡರೂ ಫಲಕಾರಿಯಾಗಲಿಲ್ಲ. ಬಂಧಿತ ಇನ್ಸ್ಪೆಕ್ಟರ್ ಇದೀಗ ಕರ್ತವ್ಯದಿಂದ ಅಮಾನತುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.