ಮಂಗಳೂರು, ಅ.08 (DaijiworldNews/AK) : ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಇತರೆ ಸಂಬಂಧಪಟ್ಟ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಆಸಿಡ್ ದಾಳಿಯ ಸಂತ್ರಸ್ಧರ ರಕ್ಷಣೆಯ ಕುರಿತು ಒಂದು ದಿನದ ಅರಿವು ಕಾರ್ಯಾಗಾರ”ವು ದಿನಾಂಕ ಅ. 8ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಸೈಂಟ್ ಆಲೋಶಿಯಸ್ ಪದವಿಪೂರ್ವ ಕಾಲೇಜಿನ ಲೋಯೆಲ್ಲಾ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.


ಕಾರ್ಯಾಗಾರವನ್ನು ಮಾನು ಕೆ. ಎಸ್ ಗೌರವಾನ್ವಿತ ಪ್ರಭಾರ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಮತ್ತು ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು. ಇವರು ಉದ್ಘಾಟಿಸಿ, ವಿಷಯದ ಮಹತ್ವ ಹಾಗೂ ಪ್ರಸ್ತುತ ಸಂದರ್ಭದಲ್ಲಿ ಅದರ ಅಗತ್ಯತೆಯ ಕುರಿತು ಮಾತನಾಡಿದರು.
ಕಾರ್ಯಾಗಾರದಲ್ಲಿ ವಿವಿಧ ಕ್ಷೇತ್ರಗಳ ಇಲಾಖೆಗಳ ಜಿಲ್ಲಾ ಅಧಿಕಾರಿಗಳು ಭಾಗವಹಿಸಿ, ಸಂಬಂಧಿತ ವಿಷಯಗಳ ಕುರಿತು ಉಪಯುಕ್ತ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀಮತಿ ಜೈಬುನ್ನಿಸಾ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ಜಗದೀಶ್ ಶೇಣವ, ಅಧ್ಯಕ್ಷರುದ ಮಂಗಳೂರು ವಕೀಲರ ಸಂಘ, ಡಾ. ಹೆಚ್ ಆರ್ ತಿಮ್ಮಯ್ಯ, ಜಿಲ್ಲಾ ಆರೋಗ್ಯ ಅಧಿಕಾರಿ ಮಂಗಳುಾರು, ಶ್ರೀಧರ್ ಎಂ.ಎಸ್., ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳುಾರು, ಕೆ. ರವಿಶಂಕರ್,ಉಪ ಪೋಲಿಸ್ ಆಯುಕ್ತರು ಮಂಗಳುಾರು, ಶ್ರೀ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಮಂಗಳೂರು, ಶ್ರೀ ರಮೇಶ್ ಬಾಬು ಟಿ, ತಹಶೀಲ್ದಾರ್ ಮಂಗಳೂರು ಸೇರಿದಂತೆ ಹಲವು ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ಭಾಗವಹಿಸಿದವರು ವಿಷಯದ ಕುರಿತು ತಮ್ಮ ಅನೂಮನಗಳನ್ನು ಪ್ರಶ್ನೋತರ ರೂಪದಲ್ಲಿ ಕೇಳಿ ಮಾಹಿತಿ ಪಡೆದುಕೊಂಡರು. ಈ ರೀತಿ ಕಾರ್ಯಾಗಾರವು ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಕೊನೆಯಲ್ಲಿ ಆಯೋಜಕರ ಪರವಾಗಿ ಎಲ್ಲ ಗಣ್ಯರು, ಸಂಪನ್ಮೂಲ ವ್ಯಕ್ತಿಗಳು ಹಾಗೂ ಭಾಗವಹಿಸಿದವರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.