ಮಂಗಳೂರು, ಅ.09 (DaijiworldNews/AK): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಅಧ್ಯಕ್ಷರಾದ ಸುರೇಂದ್ರ ಕಂಬಳಿ ಇವರ ಅಧ್ಯಕ್ಷತೆಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು.


ಸಭೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳನ್ನು ಬಯೋ ಮೆಟ್ರಿಕ್ ಅಥೆಂಟಿಕೇಷನ್ ದೃಢೀಕರಣ ಮೂಲಕ ಮರು ಪರಿಶೀಲೀಸಲು ಮುಂದಿನ ದಿನಗಳಲ್ಲಿ ಮನೆ-ಮನೆಗೆ ಬೇಟಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಗಳ ಮತ್ತು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರ ಮೂಲಕ ನಡೆಯಲಿರುವುದಾಗಿ ಸಭೆಯಲ್ಲಿ ಅಧಿಕಾರಿಗಳು ತಿಳಿಸಿದರು.
ತಾಲೂಕು ಪಂಚಾಯತ್ ಯೋಜನಾಧಿಕಾರಿಯಾದ ಸುಕನ್ಯಾ ಇವರು ಸಮಿತಿಯ ಸದಸ್ಯರು ಹಾಗೂ ಇಲಾಖಾ ಅಧಿಕಾರಿಗಳಿಗೆ ಸ್ವಾಗತಿಸಿದರು. ಸಭೆಯಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸದಸ್ಯರಾದ, ಜಯಂತಿ, ಪ್ರಶಾಂತ್ ಎಸ್, ನವಾಜ್, ಶೈಲಾ ನೀತಾ ಡಿ ಸೋಜಾ, , ರಿತೇಶ್ ಅಂಚನ್, ಶ್ರೀಧರ ಪಂಜ , ಮೊಹಮ್ಮದ್ ಮುಸ್ತಾಪ ಮತ್ತು ಮಹಮ್ಮದ್ ರಫೀಕ್ ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು, ತಾಲೂಕು ಪಂಚಾಯತ್ ವ್ಯವಸ್ಥಾಪಕರು ಸುವರ್ಣಾ ಹೆಗಡೆ, ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಯವರು ಹಾಜರಿದ್ದರು.