ಬಂಟ್ವಾಳ, ಅ.12 (DaijiworldNews/TA): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಜನ್ಮದಿನದ ಪ್ರಯುಕ್ತ ಫರಂಗಿಪೇಟೆ-ಪುದು ಅಭಿಮಾನಿ ಬಳಗದ ವತಿಯಿಂದ ಸರ್ವಧರ್ಮದವರ ಸಹಭಾಗಿತ್ವದಲ್ಲಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ಹಾಗೂ ಸಿಹಿತಿಂಡಿಗಳನ್ನು ವಿತರಿಸಲಾಯಿತು.

ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಉಮ್ಮರ್ ಫಾರೂಕ್ ಹಾಗೂ ಪುದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖಂಡರು ಸಚಿವರ ಜನಪರ ಕಾಳಜಿಯನ್ನು ಶ್ಲಾಘಿಸಿ, ಅವರಿಗೆ ಉತ್ತಮ ಆರೋಗ್ಯ ಮತ್ತು ಉನ್ನತ ಹುದ್ದೆ ದೊರೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಪಂಚಾಯಿತಿ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.