ಮಂಗಳೂರು, ಅ.14 (DaijiworldNews/AA): ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಕರಾವಳಿ ಕರ್ನಾಟಕದಾದ್ಯಂತ ಅಕ್ಟೋಬರ್ 16ರಿಂದ 20ರವರೆಗೆ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ವರದಿಯ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಕ್ಟೋಬರ್ 15ರಿಂದ 20ರ ನಡುವೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಇದಲ್ಲದೆ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಅಕ್ಟೋಬರ್ 16ರಿಂದ 20ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.