ಮಂಗಳೂರು,ಅ.14 (DaijiworldNews/AK): ದಕ್ಷಿಣ ಕನ್ನಡ ಜಿಲ್ಲಾದ್ಯಂತ ನವರಾತ್ರಿ ಹಬ್ಬದ ಪ್ರಯುಕ್ತ ಶಾರದಾ ಮಹೋತ್ಸವ ಕಾರ್ಯಕ್ರಮ ಹಾಗೂ ಮೆರವಣಿಗೆ ನಡೆಯುವ ಸಮಯದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮದ್ಯ ಮಾರಾಟ ವನ್ನು ನಿಷೇಧಿಸಲಾಗಿದೆ.

ಅಗತ್ಯತೆಯನ್ನು ಮನಗಂಡು ಮುಂಜಾಗ್ರತಾ ಕ್ರಮವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಅಗತ್ಯವಿರುವುದರಿಂದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಶೋಭಾಯಾತ್ರೆ/ ಮೆರವಣಿಗೆ ದಿನದಂದು ಆಯಾ ಪ್ರದೇಶ ವ್ಯಾಪ್ತಿಯಲ್ಲಿ ಸಂಜೆ 4 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಬಾರ್ ಮತ್ತು ವೈನ್ ಶಾಪ್ಗಳು ಸೇರಿದಂತೆ ಎಲ್ಲಾ ಪ್ರಕಾರದ ಮದ್ಯದಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.