ಮಂಗಳೂರು, ಅ.18 (DaijiworldNews/AA): ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರು ನಗರದ ವೆಲೆನ್ಸಿಯದಲ್ಲಿರುವ ಚರ್ಚ್ನ ಫಾದರ್ ಸಿಪ್ರಿಯನ್ ಪಿಂಟೋ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಬಂಧಿಕರ ಮನೆಯೊಂದರಲ್ಲಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.
ಫಾದರ್ ಸಿಪ್ರಿಯನ್ ಪಿಂಟೋ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಂತ್ರಸ್ತರು ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆಗಾಗಿ ಪ್ರಸ್ತುತ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.