ಕುಂದಾಪುರ, ಅ.18 (DaijiworldNews/TA): ಕುಂದಾಪುರದ ಸ್ಮಾರ್ಟ್ ಬಜಾರ್ ಸೂಪರ್ ಮಾರ್ಕೆಟ್ನಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದ್ದು, ಕಟ್ಟಡದಾದ್ಯಂತ ದಟ್ಟ ಹೊಗೆ ಆವರಿಸಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.



ಕಟ್ಟಡದ ಮುಖ್ಯ ಜನರೇಟರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಇದರಿಂದ ಸೂಪರ್ ಮಾರ್ಕೆಟ್ನ ಒಳಭಾಗದಲ್ಲಿ ದಟ್ಟ ಹೊಗೆ ಹರಡಿತು. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸಾರ್ವಜನಿಕರು ಸ್ಥಳದಲ್ಲಿ ಜಮಾಯಿಸಿದರು.
ಮಾಹಿತಿ ಪಡೆದ ಕುಂದಾಪುರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು. ಬಳಿಕ ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರುವಲ್ಲಿ ಸಿಬ್ಬಂದಿ ಯಶಸ್ವಿಯಾದರು. ಘಟನೆಯಿಂದ ಸಂಭವಿಸಿದ ಹಾನಿ ಹಾಗೂ ಯಾವುದೇ ಪ್ರಾಣಾಪಾಯ ಉಂಟಾಗಿದೆಯೇ ಎಂಬ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.