ಮಂಗಳೂರು, ಅ.29 (DaijiworldNews/TA): ಬೀದಿ ನಾಯಿಗಳ ಹಾವಳಿ ಹಾಗೂ ನಾಯಿ ಕಡಿತ ಪ್ರಕರಣ ಗಳನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜನವಸತಿ ಪ್ರದೇಶಗಳು ಹಾಗೂ ಶಾಲೆಗಳ ಸುತ್ತಮುತ್ತ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮವಹಿಸಬೇಕು ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಮಂಗಳೂರು ತಾಲೂಕು ದ್ವಿತೀಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಯಿ ಕಡಿತ ಪ್ರಕರಣಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದರೊಂದಿಗೆ, ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳಬೇಕು. ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ನಿಯಂತ್ರಣ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.