ಕುಂಬಳೆ, ನ.02 (DaijiworldNews/TA): ಕುಂಬಳೆ ಬಂಟರ ಸಂಘದ ವತಿಯಿಂದ ಬಂಟರ ಪರ್ಬ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಅಂಬಿಲಡ್ಕದ ಶ್ರೀಪೂಮಾಣಿ ಕಿನ್ನಿಮಾಣಿ ದೈವಸ್ಥಾನದ ವಠಾರದಲ್ಲಿ ನಡೆಯಿತು.

ಅಂಬಿಲಡ್ಕದ ಶ್ರೀಪೂಮಾಣಿ ಕಿನ್ನಿಮಾಣಿ ದೈವಸ್ಥಾನದ ಅನುವಂಶಿಕ ಮೊಕ್ತೇಸರರಾದ ಬಂಬ್ರಾಣ ಯಜಮಾನ್ ಮೋಹನ್ ದಾಸ್ ರೈ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರಿನ ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ. ಆಶಾಜ್ಯೋತಿ ರೈ ಕಾರ್ಯಕ್ರಮ ಉದ್ಘಾಟಿಸಿದರು.
ಕುಂಬಳೆ ಫಿರ್ಕ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸೇರಿದಂತೆ ಹಲವರು ಅತಿಥಿಗಳಾಗಿ ಭಾಗಿಯಾಗಿದ್ದರು. ಇನ್ನು ಕಾರ್ಯಕ್ರಮದಲ್ಲಿ ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ಹಲವು ಸ್ಪರ್ಧೆಗಳು ನಡೆದವು.