ಮಂಗಳೂರು, ನ.02 (DaijiworldNews/AA): ನಗರಾದ್ಯಂತ ಸೋಮವಾರ ಬೆಳಗ್ಗೆ 11 ಗಂಟೆಯಿಂದ ಭಾರಿ ಮಳೆ ಸುರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಧಾರಾಕಾರ ಮಳೆಯಿಂದಾಗಿ ಪ್ರಮುಖ ಕೆಪಿಟಿ ಜಂಕ್ಷನ್ನಲ್ಲಿ ಅಪಾರ ಪ್ರಮಾಣದ ನೀರು ನಿಂತಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಗಿದೆ.





ರಸ್ತೆಯ ಮೇಲೆಯೇ ನೀರು ಹರಿಯುತ್ತಿದ್ದು, ಜಂಕ್ಷನ್ನ ಬಹುಭಾಗ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ರಸ್ತೆ ಸುರಕ್ಷತೆ ಹಾಗೂ ಸಂಚಾರ ದಟ್ಟಣೆಯ ಕುರಿತು ಸಾರ್ವಜನಿಕರಲ್ಲಿ ಕಳವಳ ವ್ಯಕ್ತವಾಗಿದೆ.
ನಗರದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಸದಾ ಜನನಿಬಿಡವಾಗಿರುವ ಕೆಪಿಟಿ ಜಂಕ್ಷನ್ನಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.