ಮಂಗಳೂರು, 02 (DaijiworldNews/AK):ಕನ್ನಡ ರಾಜ್ಯೋತ್ಸವ ಮತ್ತು ಮಲಬಾರ್ ದಿನದ ಪ್ರಯುಕ್ತ ಮಲಬಾರ್ ಗೋಲ್ಡ್ & ಡೈಮಂಡ್ಸ್, ಮಂಗಳೂರು ಶೋರೂಂ ವತಿಯಿಂದ ಇಂದು ನಗರ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.

ನವೆಂಬರ್ 1 ರಂದು ಬೆಳಿಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ವೆನ್ಲಾಕ್ ಆಸ್ಪತ್ರೆ ರಸ್ತೆ, ರೈಲ್ವೆ ನಿಲ್ದಾಣದ ರಸ್ತೆ ಮತ್ತು ಮಿಲಾಗ್ರಿಸ್ ಚರ್ಚ್ ರಸ್ತೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು.
ಈ ಅಭಿಯಾನದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಸಿಬ್ಬಂದಿ ವರ್ಗದವರು ಉತ್ಸಾಹದಿಂದ ಭಾಗವಹಿಸಿದ್ದರು. ಸ್ವಚ್ಛತಾ ಅಭಿಯಾನದ ನಂತರ ಸಾಮಾಜಿಕ ಕಳಕಳಿಯ ಭಾಗವಾಗಿ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ 150 ರೋಗಿಗಳಿಗೆ ಮತ್ತು ಲೇಡಿ ಗೋಷನ್ ಆಸ್ಪತ್ರೆಯ 150 ರೋಗಿಗಳಿಗೆ ಹಣ್ಣಿನ ಕಿಟ್ಗಳನ್ನು ವಿತರಿಸಲಾಯಿತು.
ಮಲಬಾರ್ ಗೋಲ್ಡ್ & ಡೈಮಂಡ್ಸ್ ಸಂಸ್ಥೆಯು ತನ್ನ ಲಾಭಾಂಶದ ಶೇ. 5 ರಷ್ಟನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತಿದ್ದು, ಕೇವಲ ವ್ಯಾಪಾರ ಸಂಸ್ಥೆಯಾಗಿ ಉಳಿಯದೆ, ಸಾಮಾಜಿಕ ಜವಾಬ್ದಾರಿಯೊಂದಿಗೆ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದು ಶೋರೂಂ ಮುಖ್ಯಸ್ಥರು ತಿಳಿಸಿದರು.