ಉಡುಪಿ, ನ 02 (DaijiworldNews/AK): ಪ್ರದೀಪ್ ಪೂಜಾರಿ ಆತ್ಮ ಹತ್ಯೆ ಮತ್ತು ಅದಕ್ಕೆ ಪೂರಕ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ಘಟನೆಯಲ್ಲಿ ಪ್ರದೀಪ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಲು ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಅತ್ಯಾಚಾರ ಸಂತ್ರಸ್ತೆಯ ಫೋಟೋಗಳನ್ನು ವೈರಲ್ ಮಾಡಿರುವ ವಿರುದ್ದ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಎಸ್ಪಿ, ಯುವತಿ ನವೆಂಬರ್ 10, 2025 ರಂದು ಪ್ರದೀಪ್ ವಿರುದ್ಧ ಮೊದಲು ದೂರು ದಾಖಲಿಸಿದ್ದರು, ಮದುವೆಯಾಗಲು ನಿರಾಕರಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೀಪ್ನನ್ನು ಬಂಧಿಸಲಾಗಿದೆ. ಜಾಮೀನು ಪಡೆದ ನಂತರ, ಪ್ರದೀಪ್ ನವೆಂಬರ್ 29, 2025 ರ ಬೆಳಿಗ್ಗೆ ಯುವತಿಯನ್ನು ದೊಡ್ಡಪಡೆ ಎಂಬ ಸ್ಥಳಕ್ಕೆ ಕರೆದೊಯ್ದು ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾಗಿ ಮತ್ತೊಂದು ದೂರು ದಾಖಲಾಗಿತ್ತು.
ಎಸ್ಪಿ ಪ್ರಕಾರ, ಈ ಪ್ರಕರಣದಲ್ಲಿ ಅತ್ಯಾಚಾರದ ಆರೋಪವನ್ನು ಮಹಿಳೆಯ ಹೇಳಿಕೆ ಮತ್ತು ವೈದ್ಯಕೀಯ ದಾಖಲೆಗಳ ಆಧಾರದ ಮೇಲೆ ಅತ್ಯಾಚಾರ ನಡೆದಿರುವುದು ಖಚಿತವಾಗಿ ಪ್ರಕರಣವನ್ನು ಚಾರ್ಜಶೀಟ್ ಮಾಡಲಾಗಿತ್ತು ಎಂದು ಎಸ್ .ಪಿ ತಿಳಿಸಿದ್ದಾರೆ. ಮೂರನೇ ಘಟನೆ ನವೆಂಬರ್ 28, 2026 ರಂದು ನಡೆದಿರುವುದಾಗಿ ವರದಿಯಾಗಿದೆ. ಪೊಲೀಸರ ಪ್ರಕಾರ, ಪ್ರದೀಪ್ ಯುವತಿ ಸ್ನಾನ ಮಾಡಿ ಹೊರಗೆ ಬಂದಾಗ ಕೊಲ್ಲಲು ಯತ್ನಿಸಿದ್ದಾನೆ ಮತ್ತು ಆಕೆಯ ತಾಯಿಯ ಮೇಲೆ ಮೆಣಸಿನ ಪುಡಿಯನ್ನು ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರದೀಪ್ ಯುವತಿಯನ್ನು ಕೊಲ್ಲಲು ಬಂದಿರುವುದಾಗಿ ಸ್ಪಷ್ಟವಾಗಿ ಹೇಳಿದ್ದಾನೆ ಎಂದು ಹೇಳಲಾದ ಆಡಿಯೋ ರೆಕಾರ್ಡಿಂಗ್ನಲ್ಲಿದೆ ಎಂದು ಎಸ್ಪಿ ಹೇಳಿದರು. ಪ್ರದೀಪ್ ಅವರನ್ನು ಅಪಹರಿಸಲಾಗಿದೆ ಎಂಬ ಹೇಳಿಕೆ ಸತ್ಯಕ್ಕೆ ದೂರವಾದವು ಎಂದು ತಿಳಿದು ಬಂದಿದೆ. ಘಟನೆಯ ನಂತರ ಯುವತಿ ಮತ್ತು ಆಕೆಯ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೃಢಪಡಿಸುವ ವೈದ್ಯಕೀಯ ದಾಖಲೆಗಳು ಸಹ ಲಭ್ಯವಿದೆ ಎಂದು ಅವರು ಹೇಳಿದರು.
ಎಸ್ಪಿ ಪ್ರಕಾರ, ಮಹಿಳೆಯ ತಾಯಿ ತನ್ನ ಸಂಬಂಧಿಕರನ್ನು ಸ್ಥಳಕ್ಕೆ ಕರೆಯುತ್ತಾರೆ. ನಂತರ ಸುಮಾರು ಏಳರಿಂದ ಎಂಟು ಜನರು ಪ್ರದೀಪ್ ಮೇಲೆ ಹಲ್ಲೆ ಮಾಡುತ್ತಾರೆ. ಹಲ್ಲೆ ಮಾಡಿದ ಬಳಿಕ ಪೊಲೀಸರು ಸ್ಥಳಕ್ಕೆ ಬಂದು ಪ್ರದೀಪ್ ಪೂಜಾರಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿಸಿದರು
ಪ್ರದೀಪ್ ಮೇಲಿನ ಹಲ್ಲೆಗೆ ಸಂಬಂಧಿಸಿದ ದೂರನ್ನು ಆರಂಭದಲ್ಲಿ ಎಫ್ಐಆರ್ ಬದಲಿಗೆ ಎನ್ಸಿ ಕೇಸ್ ಆಗಿ ದಾಖಲಿಸಲಾಗಿತ್ತು ಎಂದು ಎಸ್ಪಿ ಬಹಿರಂಗಪಡಿಸಿದರು. ಎಫ್ಐಆರ್ ದಾಖಲು ಮಾಡದೇ ಇರುವ ಕಾರಣ ಸಬ್-ಇನ್ಸ್ಪೆಕ್ಟರ್ ಅನ್ನು ಈಗಾಗಲೇ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಮತ್ತು ಇಲಾಖಾ ವಿಚಾರಣೆ ನಡೆಯುತ್ತಿದೆ ಎಂದು ಹೇಳಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರತ್ಯೇಕ ದೂರು ದಾಖಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಐದು ತಂಡಗಳನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಗಳು ನಡೆಯುತ್ತಿವೆ. ಆದರೆ , ಕಾನೂನನ್ನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ" ಎಂದು ಎಸ್ಪಿ ಹೇಳಿದರು.
ಕಳೆದ ಎರಡು ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಎಸ್ಪಿ ಹರಿರಾಮ್ ಶಂಕರ್, ಯುವತಿ ಫೋಟೋ ಹಂಚಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ತೇಜೋವಧೆ ಮಾಡಲಾಗುತ್ತಿದೆ. ಅತ್ಯಾಚಾರ ಸಂತ್ರಸ್ತೆಯ ಫೋಟೋ ಹಚ್ಚಕೊಳ್ಳುವುದು ಕಾನೂನು ಬಾಹಿರ. ಯುವತಿ ಬಗ್ಗೆ ಅವಹೇಳನಕಾರಿ ವಿಷಯವನ್ನು ಹರಡುವಲ್ಲಿ ಭಾಗಿಯಾಗಿರುವ ಸುಮಾರು 150 ಸಾಮಾಜಿಕ ಮಾಧ್ಯಮ ಖಾತೆಗಳನ್ನು ಪೊಲೀಸರು ಈಗಾಗಲೇ ಗುರುತಿಸಿದ್ದಾರೆ ಎಂದು ಎಸ್ಪಿ ಬಹಿರಂಗಪಡಿಸಿದ್ದಾರೆ. ಸತ್ಯಗಳನ್ನು ಪರಿಶೀಲಿಸದೆ ತಪ್ಪು ಮಾಹಿತಿ ಹರಡುವ ಮತ್ತು ಮಾನಹಾನಿಕರ ಪೋಸ್ಟ್ಗಳನ್ನು ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.