ಬಂಟ್ವಾಳ, ನ.05 (DaijiworldNews/TA): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ - ತೋಟಗಾರಿಕೆ ಇಲಾಖೆ ಬಂಟ್ವಾಳ ವತಿಯಿಂದ " ಮಧು ಮಿತ್ರರಿಗೆ ಜೇನು ಕೃಷಿ ಕುರಿತು ತರಬೇತಿ ಕಾರ್ಯಕ್ರಮ" ವನ್ನು ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ. ಹಿ. ಪ್ರಾ. ಶಾಲೆ ಮಜಿ ಯಲ್ಲಿ ನವೆಂಬರ್ 04 ರಂದು ಉದ್ಘಾಟಿಸಲಾಯಿತು.

ಮಜಿ ಶಾಲೆಯ ಮುಖ್ಯ ಶಿಕ್ಷಕಿ ಬೆನಿಡಿಕ್ಟ್ ಅವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ವೀರಂಭ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಬಂಟ್ವಾಳ ತಾಲೂಕು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ದಿನೇಶ್, ಬಂಟ್ವಾಳ ತಾಲೂಕು ಜೇನು ವ್ಯವಸಾಯ ಸಂಘದ ಅಧ್ಯಕ್ಷ ಮೋಹನ್ ಪಿ. ಎಸ್,ವೀರಕಂಭ ಗ್ರಾಮ ಪಂಚಾಯತ್ ಪಿ.ಡಿ.ಒ. ಶಂಭು ಕುಮಾರ ಶರ್ಮಾ, ಜೇನು ಕೃಷಿ ಜಿಲ್ಲಾ ತರಬೇತುದಾರರಾದ ರಾಧಾಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 2 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ ವೀರಕಂಭ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸುಮಾರು 40 ಕ್ಕೂ ಆಸಕ್ತ ಕೃಷಿಕರು ಭಾಗವಹಿಸಿದ್ದರು.