ಮಂಗಳೂರು, ನ.05 (DaijiworldNews/TA): ಸುಮಾರು ಎರಡು ಶತಮಾನಗಳ ಇತಿಹಾಸ ಹೊಂದಿರುವ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಇದೀಗ ಹೊಸ ರೂಪ ಪಡೆಯಲು ಸಜ್ಜಾಗಿದೆ. 1806ರಲ್ಲಿ ಬ್ರಿಟಿಷರ ಆಡಳಿತದ ಅವಧಿಯಲ್ಲಿ ಆರಂಭವಾದ ಜಿಲ್ಲಾ ನ್ಯಾಯಾಲಯ, ಹಲವು ಐತಿಹಾಸಿಕ ಬದಲಾವಣೆಗಳಿಗೆ ಸಾಕ್ಷಿಯಾಗಿದೆ.

1862ರಲ್ಲಿ ನಿರ್ಮಾಣಗೊಂಡ ಹಳೆಯ ಪಾರಂಪರಿಕ ಕಟ್ಟಡದಲ್ಲಿ 2014ರವರೆಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಕಾರ್ಯನಿರ್ವಹಿಸಿತ್ತು. ಬಳಿಕ ನ್ಯಾಯಾಲಯವು ನೂತನ ಕೋರ್ಟ್ ಸಂಕೀರ್ಣಕ್ಕೆ ಸ್ಥಳಾಂತರಗೊಂಡಿತ್ತು.
ಇದೀಗ ಅದೇ ಪ್ರದೇಶದಲ್ಲಿ ಸುಮಾರು 60 ಕೋಟಿ ರೂಪಾಯಿ ವೆಚ್ಚದಲ್ಲಿ ಆರು ಅಂತಸ್ತಿನ ನೂತನ ನ್ಯಾಯಾಲಯ ಕಚೇರಿ ಸಂಕೀರ್ಣ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. ಹಳೆಯ ಇತಿಹಾಸದ ನೆನಪುಗಳ ನಡುವೆ ಆಧುನಿಕ ಸೌಲಭ್ಯಗಳೊಂದಿಗೆ ತಲೆ ಎತ್ತಲಿರುವ ಈ ನೂತನ ಕಟ್ಟಡ ಮಂಗಳೂರಿನ ನ್ಯಾಯಾಂಗ ವ್ಯವಸ್ಥೆಗೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ.