ಕುಂದಾಪುರ, ನ.06 (DaijiworldNews/AK): ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ತ್ರಾಸಿ-ಮುಳ್ಳಿಕಟ್ಟೆ ಫ್ಲೈಓವರ್ ಮೇಲೆ ಮೀನು ತುಂಬಿದ ವಾಹನವೊಂದು ಶುಕ್ರವಾರ, ಅದರ ಒಂದು ಟೈರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಪಲ್ಟಿಯಾದ ಘಟನೆ ನಡೆದಿದೆ.

ಮಹಾರಾಷ್ಟ್ರ ನೋಂದಣಿಯ ವಾಹನವು ಮುಂಬೈನಿಂದ ಕುಂದಾಪುರ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದಿಡೀರ್ ಟೈರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನವು ಫ್ಲೈಓವರ್ ಮೇಲೆ ಉರುಳಿ ಬಿದ್ದಿದೆ.
ಅಪಘಾತದ ಸಮಯದಲ್ಲಿ ವಾಹನದೊಳಗೆ ಚಾಲಕ ಮಾತ್ರ ಇದ್ದನು ಮತ್ತು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾನೆ.
ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಹೆದ್ದಾರಿ ಗಸ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ನಂತರ ಉರುಳಿಬಿದ್ದ ವಾಹನವನ್ನು ಕ್ರೇನ್ ಸಹಾಯದಿಂದ ಮೇಲಕ್ಕೆತ್ತಿ ತೆಗೆದುಹಾಕಲಾಯಿತು. ಪೊಲೀಸರ ತ್ವರಿತ ಕ್ರಮದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಗಮ ಸಂಚಾರ ಅನುವು ಮಾಡಿಕೊಡಲಾಯಿತು.