ಮಂಗಳೂರು, ನ.07 (DaijiworldNews/TA): ಕದ್ರಿ ಮೈದಾನದಲ್ಲಿ ಬಿಜೆಪಿ ಮಂಗಳೂರು ವಿಭಾಗ (ದ.ಕ.ಮತ್ತು ಉಡುಪಿ ಜಿಲ್ಲೆ) ವತಿಯಿಂದ ‘ಪ್ರಜಾಪ್ರಭುತ್ವ ಉಳಿಸಿ-ಅರಾಜಕತೆ ಅಳಿಸಿ’ ಎಂಬ ಪಾದಯಾತ್ರೆ ಹಾಗೂ ಸಾರ್ವಜನಿಕ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಹಾಯಕ ಸಚಿವ, ಚಿತ್ರ ನಟ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಸಂಸದರಾದ ಕ್ಯಾ. ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಉಮಾನಾಥ್ ಕೋಟ್ಯಾನ್, ಗುರ್ಮೆ ಸುರೇಶ್ ಶೆಟ್ಟಿ, ಭಾಗ್ಯರಥಿ ಮುರುಳ್ಯ, ಗುರುರಾಜ್ ಗಂಟಿಹೊಳಿ, ಭರತ್ ಶೆಟ್ಟಿ, ಹರೀಶ್ ಪೂಂಜ, ಯಶ್ಪಾಲ್ ಸುವರ್ಣ, ಕಿರಣ್ ಕುಮಾರ್ಕೊಡ್ಗಿ, ಕಿಶೋರ್ ಕುಮಾರ್ಪುತ್ತೂರು, ಮಾಜಿ ಸಚಿವರಾದ ಕೃಷ್ಣ ಜೆ. ಪಾಲೇಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.