ಮಂಗಳೂರು, ನ.08 (DaijiworldNews/TA): ಸುರತ್ಕಲ್-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಣಂಬೂರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪಣಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಚರಂಡಿಗೆ ಉರುಳಿದೆ.
ಅಪಘಾತದ ತೀವ್ರತೆಗೆ ಕಾರು ಚರಂಡಿಗೆ ಬಿದ್ದಿದ್ದರೂ, ಅದೃಷ್ಟವಶಾತ್ ಕಾರಿನಲ್ಲಿದ್ದ ವಿದ್ಯಾರ್ಥಿಗಳು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪಣಂಬೂರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.