ಸುಳ್ಯ, ನ.09 (DaijiworldNews/TA): ನಾವು ವಿವಿಧ ಶಾಲೆಗಳಲ್ಲಿ ಸಾಹಿತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸುಮಾರು 6 ಸಾವಿರದಿಂದ ,7 ಸಾವಿರ ವಿದ್ಯಾರ್ಥಿಗಳನ್ನು ನಾವು ತಲುಪಿದ್ದೇವೆ, ಈ ಸಾಹಿತ್ಯ ಸೇವೆ ನಮಗೆ ಸಂತ್ರಪ್ತಿ ತಂದಿದೆ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಸುಳ್ಯ ಪಂಜ ಹೋಬಳಿ ಘಟಕ, ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಸಾಹಿತ್ಯ ಸಂಭ್ರಮದ ಸಮಾರೋಪ ಸಮಾರಂಭ ಅವರು ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಳೆಗೇಟು ಹೊಸಗದ್ದೆ ಚಂದ್ರಶೇಖರ ಪೇರಾಲ್ ಅವರ ಅಕ್ಷರ ನಿವಾಸದ ವಠಾರದಲ್ಲಿ ಸಮಾರೋಪ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅವರು ಇದೇ ವೇಳೆ ಮಾತನಾಡಿದರು. ಡಾ.ಲೀಲಾದರ್,ಪ್ರಕಾಶ್ ಮೂಡಿತ್ತಾಯ,ಲೋಕೇಶ್ ಊರುಬೈಲು, ಅಭಿಷೇಕ್ ಎಂ. ಅವರನ್ನು ಸನ್ಮಾನಿಸಲಾಯಿತು.