ಮಂಗಳೂರು, ನ.10 (DaijiworldNews/TA): ಲೋಕಕಲ್ಯಾಣಾರ್ಥವಾಗಿ ಹಾಗೂ ಸಕಲ ಜೀವಕೋಟಿಗಳ ಅಭ್ಯುದಯಕ್ಕಾಗಿ ಮಂಗಳೂರಿನ ಐತಿಹಾಸಿಕ ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಗೋಪೂಜೆ ಕಾರ್ಯಕ್ರಮ ಭಕ್ತಿ-ಸಂಭ್ರಮದಿಂದ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅವರ ನೇತೃತ್ವದಲ್ಲಿ ಗೋಪೂಜೆ ನಡೆದಿದೆ. ಕಾರ್ಯಕ್ರಮದ ವೇಳೆ ಗೋಮಾತೆಗೆ ದೀಪಾರತಿ ಬೆಳಗಿ ಪೂಜೆ ಸಲ್ಲಿಸಲಾಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರಮುಖರು, ಪಕ್ಷದ ಕಾರ್ಯಕರ್ತರು ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು.