ಬೆಳ್ತಂಗಡಿ, ನ.10 (DaijiworldNews/AK): ನವೆಂಬರ್ 9 ರ ಸಂಜೆ ತನ್ನ ಮನೆಯ ಅಂಗಳದಲ್ಲಿ ಪಟಾಕಿ ಸಿಡಿಸುತ್ತಿದ್ದಾಗ ಆಕಸ್ಮಿಕವಾಗಿ ಪಟಾಕಿ ಸಿಡಿದು 20 ವರ್ಷದ ಯುವಕನ ಕಾಲಿಗೆ ತೀವ್ರ ಗಾಯಗಳಾಗಿವೆ.

ಗಾಯಗೊಂಡ ಯುವಕನನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ಸಮೀಪದ ಪೊರ್ನಕಂಡ ನಿವಾಸಿ ಕೃಷ್ಣಪ್ಪ ಗೌಡ ಎಂಬವರ ಪುತ್ರ ಲೈಕೇಶ್ ಗೌಡ ಎಂದು ಗುರುತಿಸಲಾಗಿದೆ.
ಮೂಲಗಳ ಪ್ರಕಾರ, ಲೈಕೇಶ್ ತಮ್ಮ ಮನೆಯಲ್ಲಿ ಪಟಾಕಿಗಳನ್ನು ಸಿಡಿಸುತ್ತಿದ್ದಾಗ, ಒಂದು ಸಣ್ಣ ತಪ್ಪು ನಿರ್ಣಯದಿಂದಾಗಿ ಅವರ ಕಾಲಿಗೆ ತುಂಬಾ ಹತ್ತಿರದಲ್ಲಿ ಸ್ಫೋಟಗೊಂಡು ತೀವ್ರ ಗಾಯಗಳಾಗಿವೆ.
ಅವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರು ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಗಾಯಗಳ ತೀವ್ರತೆಯನ್ನು ಪರಿಗಣಿಸಿ, ನಂತರ ಅವರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ಮೂಲಗಳು ತಿಳಿಸಿವೆ.