ಸುಳ್ಯ, ನ.11 (DaijiworldNews/AA): ರಿವರ್ಸ್ ತೆಗೆಯುತ್ತಿದ್ದ ಕಾರು ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಸುಳ್ಯ ತಾಲೂಕಿನ ಕಸಬಾ ಗ್ರಾಮದ ದುಗಲಡ್ಕದಲ್ಲಿ ಬುಧವಾರ ನಡೆದಿದೆ.

ಮೃತ ಮಹಿಳೆಯನ್ನು ಕಮರುನ್ನಿಸಾ(46) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಕಮರುನ್ನಿಸಾ ಅವರು ರಬ್ಬರ್ ಟ್ಯಾಪಿಂಗ್ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಿವರ್ಸ್ ಬರುತ್ತಿದ್ದ ಕಾರು ಅವರಿಗೆ ಢಿಕ್ಕಿ ಹೊಡೆದು, ಚಕ್ರಗಳ ಅಡಿಗೆ ಸಿಲುಕಿ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಮೃತದೇಹವನ್ನು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.