ಮಂಗಳೂರು, ನ.13 (DaijiworldNews/TA): ಕಾರು ಮತ್ತು ಲಾರಿ ನಡುವಿನ ಅಪಘಾತದಲ್ಲಿ ಕಾರು ಚಾಲಕ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನ ನಂತೂರು ಜಂಕ್ಷನ್ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

ನ. 12ರಂದು ರಾತ್ರಿ 9:50ರ ಸುಮಾರಿಗೆ ಪಂಪ್ವೆಲ್ ಕಡೆಯಿಂದ ಬಂದ ತಮಿಳುನಾಡು ನೋಂದಣಿಯ ಲಾರಿ ಚಾಲಕ ನಿರ್ಲಕ್ಷ್ಯದಿಂದ ಚಾಲನೆ ಮಾಡಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಎನ್ನಲಾಗಿದೆ. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಲಾರಿಯ ಹಿಂಭಾಗಕ್ಕೆ ಢಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಕಾರು ಚಾಲಕ ನಿಝಾಮ್ ಮತ್ತು ಸಹ ಪ್ರಯಾಣಿಕ ಮುಫಿಝ್ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ತಿಳಿದು ಬಂದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಲಾರಿಯ ಹಿಂಭಾಗದ ಬಲಭಾಗಕ್ಕೆ ಸ್ವಲ್ಪ ಹಾನಿಯಾಗಿದೆ.