ಸುಳ್ಯ, ನ.13 (DaijiworldNews/TA): ಉದ್ಯೋಗಾಕಾಂಕ್ಷಿಗಳಿಗೆ ಒಂದೇ ವೇದಿಕೆಯಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು.


ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉದ್ಯೋಗ ವಿನಿಮಯ ಕಚೇರಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಸಹಯೋಗದಲ್ಲಿ ಈ ಮೇಳ ಆಯೋಜಿಸಲಾಗಿದ್ದು, ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಮಿತಿ ಅಧ್ಯಕ್ಷ ಟಿ.ಎಂ. ಶಹೀದ್ ಉದ್ಘಾಟಿಸಿದರು.
ಜಿಲ್ಲಾ ಗ್ಯಾರಂಟಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಅಧ್ಯಕ್ಷತೆ ವಹಿಸಿದ್ದರು. ಮೇಳದಲ್ಲಿ 38ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿದ್ದು, ಉದ್ಯೋಗಾಕಾಂಕ್ಷಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು.