ಬೆಳ್ತಂಗಡಿ, ನ.14 (DaijiworldNews/TA): ಅಜಾಗರೂಕತೆಯಿಂದ ಬಂದ ಕಾರೊಂದು ರಾಷ್ಟ್ರೀಯ ಹೆದ್ದಾರಿ 75ರ ಬಿಳಿಯೂರು ಗ್ರಾಮದ ಮೈರಕಟ್ಟೆ ಎಂಬಲ್ಲಿ ರಿಕ್ಷಾವೊಂದಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನ. 13ರಂದು ಸಂಭವಿಸಿದ್ದು ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.

ಸರಳೀಕಟ್ಟೆ ನೈತಡ್ಕ ನಿವಾಸಿ ಸದಾಶಿವ (55) ಮೃತ ವ್ಯಕ್ತಿ. ಇವರು ತನ್ನ ರಿಕ್ಷಾದಲ್ಲಿ ಉಪ್ಪಿನಂಗಡಿಯಿಂದ ಬಿಳಿಯೂರು ಕಡೆ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಘಟನೆಯಿಂದ ಗಾಯಗೊಂಡಿರುವ ರಿಕ್ಷಾ ಪ್ರಯಾಣಿಕ ವಸಂತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದು ಚೇತರಿಸಿಕೊಂಡಿದ್ದಾರೆ.