ಸುಬ್ರಹ್ಮಣ್ಯ, ನ.14 (DaijiworldNews/TA): ಕಳೆದ 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಕೇರಳದ ತ್ರಿಶೂರ್ ನಿವಾಸಿ ಟೋಮಿ ಯಾನೆ ಥಾಮಸ್ ಬಂಧಿತ ಆರೋಪಿ.

2000ನೇ ಇಸವಿಯ ಸೆಪ್ಟೆಂಬರ್ 10ರಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಗುತ್ತಿಗಾರು ಎಂಬಲ್ಲಿ ಕೇರಳ ಮೂಲದ ಜೊಯ್, ಶೆಲ್ಟನ್ ಮತ್ತು ಟೋಮಿ ನಡುವೆ ಕೆಲಸದ ವಿಚಾರವಾಗಿ ಜಗಳ ನಡೆದಿತ್ತು. ಈ ವೇಳೆ ಜೊಯ್ ಎಂಬಾತನನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು.
ಪ್ರಕರಣ ದಾಖಲಾದಾಗಿನಿಂದ ಆರೋಪಿ ಟೋಮಿ ತಲೆಮರೆಸಿಕೊಂಡಿದ್ದ. ಇದೀಗ ನವೆಂಬರ್ 12ರಂದು ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನವೆಂಬರ್ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.