ಮಂಗಳೂರು, ನ.16 (DaijiworldNews/AK): ಮಂಗಳೂರು ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷರಾಗಿ ಶ್ರೀ ಆಲ್ಸ್ಟೈನ್ ಕ್ಲೈವ್ ಡಿ ಕುನ್ಹ ಅವರು ನ.೧೬ ರಂದು ಅಧಿಕಾರ ಸ್ವೀಕರಿಸಿದರು.

ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹ ಅಧಿಕಾರಿ ಶ್ರೀ ಮಹೇಶ್ ಕುಮಾರ್ ಹೊಳ್ಳ ಅವರು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಸಮಿತಿಯ ಆದೇಶದ ಪ್ರತಿಯನ್ನು ಇವರಿಗೆ ಹಸ್ತಾಂತರ ಮಾಡುವ ಮೂಲಕ ಅಭಿನಂದಿಸಿದರು.
ಸುರೇಂದ್ರ ಬಿ ಕಂಬಳಿ ಅವರು ಮಂಗಳೂರು ತಾಲೂಕಿನ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.