ಮಂಗಳೂರು,ನ.17 (DaijiworldNews/AK):2026 ನೇ ನವೆಂಬರ್ 20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ 73 ನೇ ಸಹಕಾರ ಸಪ್ತಾಹದ ಸಮಾರೋಪ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಉತ್ತಮ ಪತ್ತಿನ ಸಹಕಾರ ಸಂಘ ಪ್ರಶಸ್ತಿಗೆ ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಆಯ್ಕೆಗೊಂಡಿದೆ.

ಈ ಗೌರವವು ಸಂಘದ ಆಡಳಿತ ಮಂಡಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಸಂಘದ ಎಲ್ಲಾ ಸದಸ್ಯರ ಒಗ್ಗಟ್ಟಿನ ಪ್ರಯತ್ನ ಮತ್ತು ಪರಿಶ್ರಮಕ್ಕೆ ಸಂದ ಗೌರವವಾಗಿದ್ದು, ಸಂಘದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ.