ಬೆಂಗಳೂರು, ಸೆ23: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಹೃದಯ ಸಂಬಂಧಿ ಕಾಯಿಲೆಗೆ ತುತ್ತಾಗಿದ್ದರು. ಇಂದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರ ಶಸ್ತ್ರಚಿಕಿತ್ಸೆ ನಡೆದಿದ್ದು, ಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.
ಕುಮಾರಸ್ವಾಮಿ ಅವರು ಕೆಲವು ತಿಂಗಳಿನಿಂದ ನಿರಂತರವಾಗಿ ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿದ್ದರು. ಕೆಮ್ಮಿನಿಂದ ಹೃದಯದ ಮೇಲೆ ತೀವ್ರ ಒತ್ತಡ ಬಿದ್ದು, ಕಳೆದ ಕೆಲ ದಿನಗಳಿಂದ ಹೃದಯದ ತೊಂದರೆಯಿಂದ ಬಳಲುತ್ತಿದ್ದರು. ಹೀಗಾಗಿ, ಕುಮಾರಸ್ವಾಮಿ ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಇದೀಗ ಚಿಕಿತ್ಸೆ ಫಲಪ್ರದವಾಗಿದೆ.
ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಡಾ. ಸತ್ಯಕಿ ನೇತೃತ್ವದ ವೈದ್ಯರ ತಂಡ 45 ನಿಮಿಷ ಕುಮಾರಸ್ವಾಮಿ ಅವರ ಟಿಶ್ಯೂ ವಾಲ್ವ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಹೆಚ್ಡಿಕೆ ಇದೀಗ ವೈದ್ಯರ ನಿಗಾದಲ್ಲಿದ್ದಾರೆ. ಮದ್ಯಾಹ್ನದ ವೇಳೆಗೆ ಕುಮಾರಸ್ವಾಮಿ ಅವರು ಸಹಜ ಸ್ಥಿತಿಗೆ ಮರಳಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.