ದೆಹಲಿ,ಸೆ.05: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮೃತ ಗಣಪತಿ ಅವರ ತಂದೆ ಕುಶಾಲಪ್ಪ ಮತ್ತು ಸಹೋದರ ಈ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಅವರ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿಗಳಾದ ಉದಯ್ ಲಲಿತ್ ಮತ್ತು ಆದರ್ಶ ಕುಮಾರ್ ಅವರ ನೇತೃತ್ವದ ದ್ವಿಸದಸ್ಯ ಪೀಠ ಸಿಬಿಐ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಾಕೀತು ಮಾಡಿದೆ.
ಗಣಪತಿಯವರ ಆತ್ಮಹತ್ಯೆಯನ್ನು ಸಿಐಡಿ ತನಿಖೆಗೆ ಆದೇಶಿಸಿದ್ದ ರಾಜ್ಯ ಸರಕಾರ ಸಿಐಡಿ ತನಿಖೆಯಲ್ಲಿ ಅದೊಂದು ಸಾಮಾನ್ಯ ಆತ್ಮಹತ್ಯೆ ಎಂಬ ವರದಿಯನ್ನು ನಿಡಿತ್ತು.ರಾಜ್ಯ ಸರಕಾರದ ಈ ಕ್ರಮಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.