ಮಂಗಳೂರು,ಸೆ.06: ಪತ್ರಕರ್ತೆ ಹಾಗೂ ಚಿಂತಕಿ ಗೌರಿ ಲಂಕೇಶ್ ಅವರು ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಬೆಂಗಳೂರಿನ ರಾಜರಾಜೆಶ್ವರಿ ನಗರದ ತಮ್ಮ ನಿವಾಸದ ಬಳಿ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದಾಗಿ ರಾಜ್ಯವೇ ಬೆಚ್ಚಿಬಿದ್ದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಹತ್ಯೆಯನ್ನು ಖಂಡಿಸಿ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್ ನ ಸದಸ್ಯರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮೊಂಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಕೋರಿದ ಸದಸ್ಯರು, ಕೊಲೆ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದರು. ಇನ್ನು ಹತ್ಯೆಯನ್ನು ಖಂಡಿಸಿ ಇಂದು ಪಿಎಫ್ಐ, ದ.ಕ ಜಿಲ್ಲಾ ಪತ್ರಕರ್ತರ ಸಂಘ, ಡಿವೈಎಫ್ಐ ಸಂಘಟನೆಗಳು ಪ್ರತಿಭಟನೆ ನಡೆಸಲಿದೆ.