ಮಂಗಳೂರು,ಸೆ.06: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಖಂಡನೀಯ ಕೋಮುವಾದಿ ಶಕ್ತಿಗಳು ಈ ಹತ್ಯೆಗೈದಿರುತ್ತಾರೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ದ.ಕ ಜಿಲ್ಲಾಧ್ಯಕ್ಷ ಅತವುಲ್ಲಾ ಹೇಳಿದ್ದಾರೆ.
ಮಂಗಳೂರಿನ ಜ್ಯೋತಿ ವೃತ್ತದ ಬಳಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗೌರಿ ಲಂಕೇಶ್ ಹತ್ಯೆ ಖಂಡನೀಯ. ಸರ್ಕಾರ ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.