ಮಂಗಳೂರು,ಸೆ.06: ಇನ್ನು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಕೇಂದ್ರ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿ ಖಂಡಿಸಿದ್ದು, ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇದೊಂದು ಪೂರ್ವನಿಯೋಜಿತ ಕೃತ್ಯ. ರಾಜ್ಯಸರಕಾರ ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ಇದೇ ಸಂದರ್ಭ ಮಂಗಳೂರು ಚಲೋ ವಿಚಾರವಾಗಿ ಪ್ರತಿಕ್ರಿಯಿಸಿದ ಪೂಜಾರಿ, ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಬಿಜೆಪಿ ಕರಾವಳಿಯಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಯಾವುದೇ ಸರಕಾರ ಸಹಿಸುವುದಿಲ್ಲ ಎಂದು ಹೇಳಿದರು.