ಬಂಟ್ವಾಳ, ಅ 13: ಜಿಲ್ಲೆಯಲ್ಲಿರುವ ಮರಳು ಸಮಸ್ಯೆಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಕ್ಷೇತ್ರ ಬಿಜೆಪಿ ವತಿಯಿಂದ ಬ್ರಹತ್ ಪ್ರತಿಭಟನೆ ನಡೆಯಿತು.
ಮರಳು ಸಮಸ್ಯೆಯಿಂದ ಜಿಲ್ಲೆಯ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರೂ ಆಡಳಿತ ಯಂತ್ರ ಮಾತ್ರ ಯಾವುದೇ ಸಂಬಂಧವಿಲ್ಲದಂತೆ ಕಣ್ಣು ಮುಚ್ಚಿ ಕುಳಿತಿದೆ. ನೇತ್ರಾವತಿ ಅಂಗಳದಲ್ಲಿರುವ ಈ ಜಿಲ್ಲೆಯ ಜನರಿಗೆ ಮರಳು ಸಿಗುತ್ತಿಲ್ಲ. ಆದರೆ ಹೊರ ಜಿಲ್ಲೆಯ ಜನರಿಗೆ ಸುಲಭವಾಗಿ ಮರಳು ಸಿಗುತ್ತಿದೆ. ಇದು ಯಾವ ನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲೆಯ ಜನರಿಗೆ ಮರಳು ಸುಲಭವಾಗಿ ಸಿಗಬೇಕು. ಅ ನಿಟ್ಟಿನಲ್ಲಿ ಏಕರೂಪದ ಮರಳು ನೀತಿಯನ್ನು ರೂಪಿಸಬೇಕು. ಮಾತ್ರವಲ್ಲದೆ, ಜಿಲ್ಲೆಗೆ ಪ್ರತ್ಯೇಕ ಮರಳು ನೀತಿಯನ್ನು ಮಾಡಬೇಕು. ಹೊರ ಜಿಲ್ಲೆಗೆ ಮರಳು ಸಾಗಾಟ ಮಾಡುವುದನ್ನು ನಿಲ್ಲಿಸಬೇಕು. ಅಕ್ರಮ ಮರಳುಗಾರಿಕೆ ಕೊನೆಯಾಗಬೇಕು ಎಂದು ಒತ್ತಾಯಿಸಿದರು.
ಮರಳು ಸಮಸ್ಯೆಗೆ ಇಲ್ಲಿನ ಉಸ್ತುವಾರಿ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲೆಯ ಜನರಿಗೆ ಮನೆ ಕಟ್ಟಲು ಮರಳು ನೀಡಿ ಇಲ್ಲದಿದ್ದರೆ ನೇತ್ರಾವತಿ ನದಿಯಿಂದ ನೇರವಾಗಿ ಮರಳನ್ನು ತೆಗೆದು ಮನೆ ಕಟ್ಟಲು ಬಡ ಜನರಿಗೆ ನೀಡುವ ಕೆಲಸ ನಾವೇ ಮಾಡುತ್ತೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಉಳಿಪ್ಪಾಡಿ ಗುತ್ತು ರಾಜೇಶ್ ನಾಯಕ್. ರುಕ್ಮಯ ಪೂಜಾರಿ. ಜಿ ಆನಂದ, ದೇವದಾಸ ಶೆಟ್ಟಿ, ತುಂಗಪ್ಪ ಬಂಗೇರ ಮತ್ತಿತರರು ಉಪಸ್ಥಿತರಿದ್ದರು