ಬೆಂಗಳೂರು,ಸೆ.06: ಗೌರಿ ಲಂಕೆಶ್ ಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ತುರ್ತು ಸಭೆ ನಡೇದಿದೆ. ಡಿಜಿಪಿ ಆರ್.ಕೆ.ದತ್ತಾ, ಗೃಹ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಚರ್ಚೆ ನಡೆಸಿದ್ದಾರೆ.
ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ. ಅಲ್ಲದೆ ಹತ್ಯೆಯ ತನಿಖೆಗೆಂದು (ಸ್ಪೆಷಲ್ ಇನ್ವೆಸ್ಟಿಗೇವ್ ಟೀಮ್) ಎಸ್ಐಟಿ ಐಜಿಗಳ ತಂಡ ರಚಿಸಲಾಗಿದೆ. ಮಾತ್ರವಲ್ಲದೆ ಎಲ್ಲಾ ಪ್ರಗತಿಪರ ಚಿಂತಕರಿಗೆ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ ಎಂದಿದ್ದಾರೆ. ಇದಕ್ಕೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.