ಮಂಗಳೂರು, ಅ 14: ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಯ ಜೊತಗೆ ನಂಟು ಬೆಳೆಸಿ, ಉಗ್ರರಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳೂರಿನ ಪಂಜಿಮೊಗರಿನಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಸುಮಾರು 5 ಲಕ್ಷ ರೂ. ಮೌಲ್ಯದ ಸ್ವತ್ತು ಮುಟ್ಟುಗೋಲು ಹಾಕಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರಿನಲ್ಲಿ ಈ ದಾಳಿ ನಡೆಸಿ ಅಕ್ರಮ ಹಣ ಸಾಗಾಟ ಆರೋಪದ ಮೇಲೆ ಆಸ್ತಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಧೀರಜ್ ಸಾವೋ ಎಂಬಾತನ ಹಣದ ವ್ಯವಹಾರವನ್ನು ಗಮನಿಸಿ, ಈತನಿಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈತನ ಅಕೌಂಟ್ಗೆ ದೇಶದ ವಿವಿಧ ಭಾಗಗಳಿಂದ ಹಣ ಹರಿದು ಬಂದಿದೆ. ತನಗೆ ಬಂದ ಹಣದ ಸ್ವಲ್ಪ ಪಾಲನ್ನುಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದ ಜುಬೈರ್ ಹುಸೇನ್, ಅಯೆಶಾಬಾನು, ರಾಜುಖಾನ್ ಮತ್ತು ಇತರರ ಖಾತೆಗೆ ರವಾನಿಸುತ್ತಿದ್ದ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.
ಪಾಕ್ ಜೊತೆಗ ಸಂಬಂಧ ಇಟ್ಟುಕೊಂಡಿರುವ ಧೀರಜ್ ಸಾವೋನ ಹಣದ ಸಹಾಯದಿಂದಲೇ ಬಾನು ಮತ್ತು ಹುಸೇನ್ ಮಂಗಳೂರಿನ ಪಂಜಿಮೊಗರುವಿನಲ್ಲಿ ವಸತಿ ಯೋಗ್ಯ ಆಸ್ತಿ ಖರೀಸಿದ್ದರು. ಈ ಆಸ್ತಿಯನ್ನೂ ಮುಟ್ಟುಗೋಲು ಹಾಕಿಕೊಂಡಿದ್ದೇವೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.