ಬೈಂದೂರು,ಸೆ.06: ಬಿಜೆಪಿ ಯುವ ಘಟಕದ ವತಿಯಿಂದ ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಸಮಾವೇಶಕ್ಕೆ ಬೈಂದೂರಿನಿಂದ ಬೈಕ್ ರ್ಯಾಲಿಯನ್ನು ಆರಂಭಿಸಲಾಗಿತ್ತು. ಆದರೆ ರ್ಯಾಲಿಗೆ ಅನುಮತಿ ಇಲ್ಲದ ಕಾರಣ ಪೊಲೀಸರು ಬೈಕ್ ಗಳನ್ನು ತಡೆದರು. ಹಾಗೂ ಬಿಜೆಪಿ ಮುಖಂಡರಾದ ಬಿ.ಎಮ್. ಸುಕುಮಾರ್ ಶೆಟ್ಟಿ, ಬೈಂದೂರು ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಸೇರಿದಂತೆ ಹಲವು ಮಂದಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಕುಂದಾಪುರದ ಕುಂದೇಶ್ವರ ದೇವಸ್ಥಾನದ ಬಳಿಯಿಂದಲೂ ಬೈಕ್ ರ್ಯಾಲಿಯನ್ನು ಆರಂಭಿಸಲಾಗಿತ್ತು. ಶಾಸ್ತ್ರಿ ವೃತ್ತದ ಬಳಿ ತಲುಪುತ್ತಿದ್ದಂತೆ ಪೊಲೀಸರು ಬೈಕ್ ರ್ಯಾಲಿಯನ್ನು ತಡೆದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ, ಹಲವು ಮಂದಿ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.