ಮಂಗಳೂರು,ಸೆ.06: ದ.ಕ.ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳಲ್ಲಿ 7 ಮತ್ತು 8 ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 35(3)ರ ಅನ್ವಯ ಯಾವುದೇ ರೀತಿಯ ಬೈಕ್ ರ್ಯಾಲಿ ನಡೆಸುವುದನ್ನು ಮತ್ತು ಯಾವುದೇ ಸಂಘಟನೆ ಕಾರ್ಯಕರ್ತರು ಬೈಕ್ ಗಳಲ್ಲಿ ಜಿಲ್ಲೆಯನ್ನು ಪ್ರವೇಶಿಸದಂತೆ ನಿರ್ಬಂಧಕಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಆದೇಶಿಸಿದ್ದಾರೆ.
ಇನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ವಿಧಿಸಿ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಆದೇಶ ಹೊರಡಿಸಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿ ಯಾವುದೇ ಬಾರ್ ಮತ್ತು ವೈನ್ ಶಾಪ್ ತೆರೆಯದಂತೆ ಆದೇಶ ಹೊರಡಿಸಲಾಗಿದೆ.