ಶಿವಮೊಗ್ಗ: ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ ಎಸ್ ಈಶ್ವರಪ್ಪ ಅವರಿಗೆ ಜೀವಬೆದರಿಕೆ ಕರೆ ಬಂದಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ಖುದ್ದು ಈಶ್ವರಪ್ಪ ಅವರು ಬುಧವಾರದಂದು ಶಿವಮೊಗ್ಗ ಎಸ್ಪಿ ಅಭಿನವ್ ಖರೆ ಅವರಿಗೆ ದೂರು ನೀಡಿದ್ದಾರೆ.
ಆ ಕಡೆಯಿಂದ ಮಾತನಾಡಿದ ವ್ಯಕ್ತಿ ಕನ್ನಡ ಮಿಶ್ರಿತ ಉದರ್ು ಭಾಷೆಯಲ್ಲಿ ಮಾತನಾಡಿರುವುದಾಗಿ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿ, ಮುಸ್ಲಿಂ ವಿರೋಧಿಯಾದ ನಿಮ್ಮನ್ನು ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಈಶ್ವರಪ್ಪ ತಿಳಿಸಿದ್ದಾರೆ.
ಈ ಹಿಂದೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ವಿನಯ್ ಕುಲಕಣರ್ಿಯವರಿಗೂ ಬೆದರಿಕೆ ಕರೆಗಳು ಬಂದಿದ್ದವು. ಜೊತೆಗೆ ಡಿ ಕೆ ಸುರೇಶ್ ಮತ್ತು ಸಚಿವ ಎಚ್ ಎಂ ರೇವಣ್ಣ ಅವರಿಗೂ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ದೂರು ದಾಖಲಾಗಿತ್ತು.