ಮಂಗಳೂರು, ಸೆ.8: ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಸಂಘ ಪರಿವಾರದ ಕಾರ್ಯಕರ್ತ ಪ್ರಶಾಂತ್ ಪೂಜಾರಿಯನ್ನು 2015 ಸೆಪ್ಟೆಂಬರ್ ತಿಂಗಳಲ್ಲಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಇದೀಗ ಮಂಗಳೂರು ನಾಲ್ಕನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸಿರಾಜುದ್ದೀನ್ ಉಳ್ಳಾಲ, ತಾಜುದ್ದೀನ್, ಅಕ್ಬರ್ ವಳಚ್ಚಿಲ್ ಮತ್ತು ಅನ್ವರ್ ಬಜ್ಪೆ ಜಾಮೀನು ಪಡೆದ ಆರೋಪಿಗಳು. ೨೦೧೫ರ ಸೆಪ್ಟೆಂಬರ್ ತಿಂಗಳಲ್ಲಿ ಮೂಡುಬಿದಿರೆ ಪೇಟೆಯಲ್ಲಿ ಪ್ರಶಾಂತ್ ಪೂಜಾರಿ ಹತ್ಯೆ ನಡೆದಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದಿರೆ ಪೊಲೀಸರು ೧೦ ಮಂದಿಯನ್ನು ಬಂಧಿಸಿ ೧೭ ಮಂದಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ೭ ಮಂದಿ ಆರೋಪಿಗಳು ೨ ತಿಂಗಳ ಹಿಂದೆ ಮೂಡುಬಿದಿರೆ ನ್ಯಾಯಾಲಯಕ್ಕೆ ಶರಣಾಗಿದ್ದರು. ಮೂಡುಬಿದಿರೆ ಪೊಲೀಸರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಆರೋಪಿಗಳು ಜಾಮೀನು ಕೋರಿ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.