ಮಂಗಳೂರು, ನ 17: ನಗರದಲ್ಲಿ ಕೆ.ಪಿ.ಎಂ.ಇ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ಕೂಡ ಖಾಸಗಿ ಆಸ್ಪತ್ರೆ ವೈದ್ಯರು ಮುಷ್ಕರ ಮುಂದುವರಿಸಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗದ ಸೇವೆ ಬಂದ್ ಆಗಿದೆ.
ವೈದ್ಯರ ಬೇಡಿಕೆಗೆಗಳಿಗೆ ಸಂಬಂಧಿಸಿದಂತೆ ಸರಕಾರದಿಂದ ಪೂರಕ ಪ್ರತಿಕ್ರಿಯೆ ಬಂದ ಹಿನ್ನೆಲೆ ಹಾಗೂ ಹೈಕೋರ್ಟ್ ನಿರ್ದೇಶನದ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಖಾಸಗಿ ಆಸ್ಪತ್ರೆ ವೈದ್ಯರು ಮುಷ್ಕರ ವಾಪಾಸ್ ಪಡೆದಿದ್ದರು.
ಮಂಗಳೂರಿನಲ್ಲಿ ಮಾತ್ರ ವೈದ್ಯರ ಮುಷ್ಕರ ಇಂದೂ ಕೂಡ ಮುಂದುವರಿದಿದ್ದು, ಒಪಿಡಿ ಸೇವೆ ಲಭ್ಯವಿಲ್ಲ ಎಂದು ತಿಳಿದುಬಂದಿದೆ. ಇನ್ನು ಈ ಸಂಬಂಧ ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ರಮೆಶ್ ಕುಮಾರ್ ವೈದ್ಯರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಭಾರತೀಯ ವೈದ್ಯಕೀಯ ಸಂಘ, ಖಾಸಗಿ ವೈದ್ಯಕೀಯ ಸಂಸ್ಥೆಗಳು, ಇತರ ಪ್ರಮುಖರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ತಿಳಿದುಬಂದಿದೆ.