ಬಂಟ್ವಾಳ, ಜೂ. 19(DaijiworldNews/AA): ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ತಲಪಾಡಿ ಮೆಸ್ಕಾಂ ಸಬ್ ಸ್ಟೇಷನ್ ಬಳಿಯ ನದಿಯಲ್ಲಿ ಇಂದು ಸಂಜೆ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ಬಿ.ಸಿ.ರೋಡ್ ಕೈಕಂಬ ನಿವಾಸಿ ಅಬ್ದುಲ್ ಕರೀಂ (61) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಅಬ್ದುಲ್ ಕರೀಂ ಅವರು ಬಕ್ರೀದ್ ಹಬ್ಬದ ಸಂಜೆ ಮನೆಯಿಂದ ಹೊರಟವರು ಬಳಿಕ ನಾಪತ್ತೆಯಾಗಿದ್ದರು. ಇನ್ನು ನದಿಯಲ್ಲಿ ಪತ್ತೆಯಾದ ಅಬ್ದುಲ್ ಅವರ ಮೃತದೇಹವನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.