ಉಡುಪಿ, ಜು 04 (DaijiworldNews/ AK): ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಸ್ಥಳೀಯ ಸಾರ್ವಜನಿಕರಿಗೆ ಈ ಹಿಂದೆ ನೀಡಿದ ರೀತಿಯಲ್ಲಿ ಸುಂಕ ವಿನಾಯಿತಿ ನೀಡಬೇಕು. ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ವೈಜ್ಞಾನಿಕ ರೀತಿಯಲ್ಲಿ ರಸ್ತೆ ಅಭಿವೃದ್ಧಿ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು ಇಳಿಕೆಯಾಗುವಂತೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.



ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಟೋಲ್ ಶುಲ್ಕ ವಸೂಲಾತಿ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗಿರುವ ದೂರುಗಳ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ, ಸಾಸ್ತಾನ ಹಾಗೂ ಶಿರೂರಿನ ಟೋಲ್ಗಳ ಸಮೀಪ ವ್ಯಾಪ್ತಿಯಲ್ಲಿ ವಾಸವಿರುವ ಸ್ಥಳೀಯ ಸಾರ್ವಜನಿಕರು ತಮ್ಮ ದೈನಂದಿನ ಕಾರ್ಯಚಟುವಟಿಕೆಗಳಿಗೆ ದಿನದಲ್ಲಿ ಐದಾರು ಬಾರಿಗೂ ಹೆಚ್ಚು ಟೋಲ್ನಲ್ಲಿ ಹಾದುಹೋಗುವಾಗ ಪ್ರತಿಬಾರಿಯೂ ಶುಲ್ಕ ಪಾವತಿ ಮಾಡಲು ಅನಾನುಕೂಲತೆ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವ ಹಿನ್ನೆಲೆ, ಸ್ಥಳೀಯ ವ್ಯಾಪ್ತಿಯಲ್ಲಿ ವಾಸಿಸುವ ಸಾರ್ವಜನಿಕರಿಗೆ ಈ ಹಿಂದೆ ನೀಡುತ್ತಿದ್ದ ರೀತಿಯಲ್ಲಿಯೇ ಅವರುಗಳ ವಾಹನಗಳಿಗೆ ವಿನಾಯಿತಿ ಕಲ್ಪಿಸಬೇಕು ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿರುವುದು ಕೇಳಿಬರುತ್ತಿವೆ. ಇವುಗಳಿಗೆ ಕಾರಣ ರಸ್ತೆಯಲ್ಲಿನ ಅವೈಜ್ಞಾನಿಕ ಕೆಲಸ ಕಾರ್ಯಗಳು ಸೇರಿದಂತೆ ಮತ್ತಿತರ ಸಮಸ್ಯೆಗಳಿಂದ ಉಂಟಾಗುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಅಗತ್ಯವಿರುವ ಕಡೆ ಸರ್ವೀಸ್ ರಸ್ತೆ, ರಸ್ತೆ ರಿಫ್ಲೆಕ್ಟರ್ಗಳ ಅಳವಡಿಕೆ, ದಾರಿದೀಪ ಅಳವಡಿಕೆ, ರಸ್ತೆಯಲ್ಲಿ ಹೊಂಡ ದುರಸ್ಥಿ, ಜಂಕ್ಷನ್ಗಳಲ್ಲಿ ಸರಿಯಾದ ಸೂಚನಾ ಫಲಕ ಅಳವಡಿಸುವುದು ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದು ರಾ.ಹೆ. ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಕೆಲವು ಟೋಲ್ ಸಮೀಪದಲ್ಲಿ ಹೋಟೆಲ್ಗಳು ಮತ್ತು ಅಂಗಡಿಗಳು ಇರುವುದರಿಂದ ವಾಹನಗಳು ರಸ್ತೆಯಲ್ಲಿ ಪಾರ್ಕ್ ಮಾಡಿದ ಸಂದರ್ಭದಲ್ಲಿ ಅಪಘಾತಗಳು ಉಂಟಾಗುವ ಸಾಧ್ಯತೆ ಇವೆ. ಇವುಗಳ ತೆರವಿಗೆ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ಟೋಲ್ ಸಮೀಪದಲ್ಲಿ ಹೆಣ್ಣು ಮಕ್ಕಳ ವಿಶ್ರಾಂತಿ ಕೊಠಡಿ, ಶೌಚಾಲಯದ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಹಾಗೂ ಜಂಕ್ಷನ್ಗಳಲ್ಲಿ ಸಿ.ಸಿ.ಟಿವಿ ಆಳವಡಿಸುವಂತೆ ತಿಳಿಸಿದರು.
ಈಗಾಗಲೇ ರಾಷ್ಟೀಯ ಹೆದ್ದಾರಿಯ ಕೆಲವು ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡಲು ಅನುಮತಿ ದೊರಕಿದ್ದು, ಇವುಗಳ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಬೇಕು. ಅವಶ್ಯವಿರುವ ಇತರೆ ಸ್ಥಳಗಳಲ್ಲಿ ಸರ್ವೀಸ್ ರಸ್ತೆ ಹಾಗೂ ಮೇಲ್ಸೆತುವೆ ನಿರ್ಮಾಣಕ್ಕೆ