ಉಡುಪಿ, ಜು 04 (DaijiworldNews/ AK): ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ಜುಲೈ 05 ರಂದು ಜಿಲ್ಲಾಡಳಿತ ರಜೆ ಘೋಷಿಸಿದೆ.

ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಐಟಿಐ ಹೊರತುಪಡಿಸಿ, ಪದವಿ ಕಾಲೇಜುಗಳು, ಡಿಪ್ಲೊಮಾ ಕಾಲೇಜುಗಳು, ಎಂಜಿನಿಯರಿಂಗ್ ಮತ್ತು ಸ್ನಾತಕೋತ್ತರ ತರಗತಿಗಳು ಕಾರ್ಯನಿರ್ವಹಿಸಲಿದೆ ಎಂದು ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಹೊರಡಿಸಿದ್ದಾರೆ.