ಕುಂದಾಪುರ, ಜು.05(DaijiworldNews/AA): ಸಕ್ಕರೆ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಕುಂದಾಪುರದ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಸಂಭವಿಸಿದೆ.




ಸೊಲ್ಲಾಪುರದಿಂದ ಕೇರಳಕ್ಕೆ ಸಕ್ಕರೆ ತುಂಬಿದ್ದ ಲಾರಿ ತೆರಳುತ್ತಿತ್ತು. ಈ ಲಾರಿಯು ಎದುರಿನಿಂದ ಬರುತ್ತಿದ್ದ ಭಾರೀ ವಾಹನವನ್ನು ತಪ್ಪಿಸುವ ಭರದಲ್ಲಿ ಮತ್ತೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಗಂಗೊಳ್ಳಿ ಪೊಲೀಸರು ಮತ್ತು ಹೆದ್ದಾರಿ ಗಸ್ತು ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಘಟನೆಯಿಂದಾಗಿ ಮಲ್ಲಿಕಟ್ಟೆ ಹೆದ್ದಾರಿ ಜಂಕ್ಷನ್ನಲ್ಲಿ ತಾತ್ಕಾಲಿಕವಾಗಿ ಸಂಚಾರ ಅಸ್ತವ್ಯಸ್ತಗೊಂಡಿದೆ.